ಪತ್ರಿಕಾ ಪ್ರಕಟಣೆ

ಇತ್ತೀಚೆಗೆ ಮಂಗಳೂರು ನಗರದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಪಟ್ಟಂತೆ ಅಪರಾಧಿಗಳನ್ನು ಪತ್ತೆ ಹಚ್ಚಿ ಅಪರಾಧಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಂಗಳೂರು ಸಿಸಿಬಿ ಪೊಲೀಸರ ತಂಡಕ್ಕೆ ಮಾನ್ಯ ಕರ್ನಾಟಕ ರಾಜ್ಯದ ಮಾನ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷಕ ರವರು ಮಂಗಳೂರಿಗೆ ಭೇಟಿ ಸಮಯ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನವನ್ನು ನೀಡಿರುತ್ತಾರೆ.
ಇತ್ತೀಚೆಗೆ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಕೆ ಜಿ ಗಾಂಜಾ ಎಂಬ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂರು ಮಂದಿ ಆರೋಪಿಗಳನ್ನು ಪತ್ತೆ ಹಚ್ಚಿದ ಪ್ರಕರಣ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಸಹಕಾರಿ ಸೇವಾ ಬ್ಯಾಂಕ್ ನಲ್ಲಿ ನಡೆದ ಚಿನ್ನಾಭರಣ ದರೋಡೆ ಯತ್ನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣವನ್ನು ಭೇದಿಸಿದ ಹಾಗೂ ದಿನಾಂಕ: 07-07-2017 ರಂದು ಮಾನ್ಯ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯವರು ಮಂಗಳೂರು ಭೇಟಿ ನೀಡಿದ ಸಮಯ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯಾರು ಕಟ್ಟೆ ಬಳಿ ನಡೆದ ಸಾಜಿದ್ ಎಂಬ ವಿದ್ಯಾರ್ಥಿಯ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪತ್ತೆ ಹಚ್ಚಿದ ಪ್ರಕರಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಸ್ಟಿನ್ ಎಂಬ ಯುವಕನ ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ತಕ್ಷಣ ಬಂಧಿಸಿ ಪ್ರಕರಣಗಳನ್ನು ಭೇಧಿಸಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಶ್ರಮಿಸಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯವೈಖರಿಯನ್ನು ಪ್ರಶಂಸಿಸಿ ರೂ. 50,000/- ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರವನ್ನು ನೀಡಿರುತ್ತಾರೆ.

????????????????????????????????????

Leave a Reply

Your email address will not be published. Required fields are marked *