ಮಸಾಜ್ ಪಾರ್ಲರ್ ಗೆ ದಾಳಿ : ಮೂವರ ಬಂಧನ

ಮಂಗಳೂರು ನಗರದ ಬಿಜೈ ಚರ್ಚ್ ಕ್ರಾಸ್ ರಸ್ತೆಯಲ್ಲಿ ಕಾರ್ಯಚರಿಸುತ್ತಿದ್ದ ಅಕ್ರಮ ಮಸಾಜ್ ಪಾರ್ಲರ್ ಗೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಮಂಗಳೂರು ನಗರದ ಬಿಜೈ ಚರ್ಚ್ ಕ್ರಾಸ್ ರಸ್ತೆಯ ಮುದ್ರಾ ಎಂಬ ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಮಸಾಜ್ ಪಾರ್ಲರ್ ಗೆ ದಾಳಿ ನಡೆಸಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದ

1) ಅರುಣ್.ಎಂ.ಪಿ, ಪ್ರಾಯ 35 ವರ್ಷ, ಕಣ್ಣೂರು ಜಿಲ್ಲೆ, ಕೇರಳ ರಾಜ್ಯ
2) ಅಬ್ದುಲ್ ರಝೂಲ್.ಎಂ.ಪಿ, ಪ್ರಾಯ 28 ವರ್ಷ, ತಲಿಪರಂಬ್, ಕೇರಳ ರಾಜ್ಯ
3) ಅನ್ಸರ್, ಪ್ರಾಯ 31 ವರ್ಷ, ಉಳ್ಳಾಲ, ಮಂಗಳೂರು ತಾಲೂಕು.
ಎಂಬವರನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಆರೋಪಿಗಳು ಈ ಮಸಾಜ್ ಪಾರ್ಲರ್ ನಲ್ಲಿ ಬಾಡಿ ಮಸಾಜ್ ಎಂಬ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದರು. ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಪೊಲೀಸ್ ಕಮೀಷನರ್ ಶ್ರೀ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಶ್ರೀ.ಕೆ.ಎಂ. ಶಾಂತರಾಜು, ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ ಶ್ರೀ ಹನುಮಂತರಾಯ ಮತ್ತು ಎಸಿಪಿ ಸಿಸಿಆರ್ ಬಿ ಶ್ರೀ ವೆಲೆಂಟೈನ್ ಡಿ ಸೋಜಾ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯ್ಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *